November 8, 2025

ತಾಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಬಾಲಕಿಯರು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆ 

 

ಇಂಡಿ: ತಾಲೂಕಿನ ತಾಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಬಾಲಕಿಯರು ಥ್ರೊಬಾಲ ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು ಗ್ರಾಮಸ್ಥರು ಹರ್ಷ ವ್ಯಕ್ತ ಪಡಿಸಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕಿಯರ ಥ್ರೋಬಾಲ ಕ್ರೀಡೆಯಲ್ಲಿ ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಗೊಂಡು ತಾಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಗೆ ಕೀರ್ತಿ ತಂದಿದ್ದಾರೆ. ಬಾಲಕಿಯರ ಸಾಧನೆಗೆ ಮುಖೋಪಾಧ್ಯಾಯ ಪಿ.ಕೆ.ಬಿರಾದಾರ, ಎಸ್.ಡಿ.ಎಮ್.ಸಿ ಅಧ್ಯಕ್ಷ ಸಿದಗೊಂಡ ಹಿರೇಕುರಬರ, ಎಸ್.ಡಿ.ಎಮ್.ಸಿ ಸದಸ್ಯರು, ಶಾಲೆಯ ದೈಹಿಕ ಶಿಕ್ಷಕ ಎಚ್‌.ಕೆ. ಮಾಳಗೊಂಡ, ಸಹಶಿಕ್ಷಕರು, ಗ್ರಾಮಸ್ಥರು ಅಭಿನಂದಿಸಿದರು.

error: Content is protected !!