ಮಹರ್ಷಿ ವಾಲ್ಮೀಕಿ ಗುರುಪೀಠ ದೊಡ್ಡಬಳ್ಳಾಪುರ ಮತ್ತು ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದ ಸಹಯೋಗದಲ್ಲಿ ವಾಲ್ಮೀಕಿ ಸೇವಾರತ್ನ ಪ್ರಶಸ್ತಿಯನ್ನು ದಿನಾಂಕ 09/11/2024 ರಂದು ಬೆಂಗಳೂರು ಗಾಂಧಿ ಭವನದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ವಿಶ್ವರಾಧ್ಯ ದಳವಾಯಿ ಸುಂಬಡ ಅವರಿಗೆ 2024 ರ ವಾಲ್ಮೀಕಿ ಸೇವಾರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀ ಬ್ರಹ್ಮಾನಂದ ಸ್ವಾಮೀಜಿಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಒಳ್ಳೆಯ ಸಂಸ್ಕಾರ ನೀಡಬೇಕೆಂದು ಹೇಳಿದರು. ಹಾಗೂ ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪಿ.ಮೋಹನ್ ಕಿಶೋರ ಅವರು ಮಾತನಾಡಿ ನಮ್ಮ ವಾಲ್ಮೀಕಿ ಜನಾಂಗದ ಅವಕಾಶ ವಂಚಿತರಿಗೆ ನ್ಯಾಯ ಸಿಗಬೇಕು ಎಲ್ಲರೂ ಒಗ್ಗಟ್ಟಿನಿಂದ ಸಹಬಾಳ್ವೆ ಮಾಡಬೇಕು, ಮುಂದಿನ ದಿನಮಾನಗಳಲ್ಲಿ ಕರ್ನಾಟಕದ 31 ಜೆಲ್ಲೆಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಮುಖ್ಯವಾಹಿನಿಗೆ ತಂದು ವಾಲ್ಮೀಕಿ ಸೇವಾರತ್ನ ಪ್ರಶಸ್ತಿ ನೀಡಲಾಗವುದು ಎಂದು ಹೇಳಿದರು.
ವರದಿ ರಾಜಶೇಖರ ಮಾಲಿ ಪಾಟೀಲ್ ಯಾದಗಿರಿ

More Stories
ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ
300ಕೋಟಿ ವೆಚ್ಚದ, 220ಕೆವಿ ವಿದ್ಯುತ್ ಉಪಕೇಂದ್ರಕ್ಕೆ ಗುದ್ದಲಿ ಪೂಜೆ
ಮಾರ್ಚ್ 5ರಂದುನೆಲಮಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ